ಬೆಂಗಳೂರು : ಪ್ರಜ್ವಲ್ ತಪ್ಪು ಮಾಡದೇ ಇದ್ರೆ ಜೆಡಿಎಸ್ ನಿಂದ ಅಮಾನತು ಮಾಡಿದ್ದು ಯಾಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ , ಪೆನ್ ಡ್ರೈವ್ ಪ್ರಕರಣದಲ್ಲಿ ಸರ್ಕಾರ ಕಾನೂನು ಪ್ರಕಾರ ತನಿಖೆ ನಡೆಸುತ್ತದೆ, ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆ ಕೊಡಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ದೇವರಾಜೇಗೌಡ ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡದಂತೆ ಬಿಜೆಪಿಗೆ ಪತ್ರ ಬರೆದಿದ್ದರು. ಈ ವಿಚಾರ ತಿಳಿದಿದ್ದರೂ ಟಿಕೆಟ್ ನೀಡಿದ್ದು ಯಾಕೆ? : ಪ್ರಜ್ವಲ್ ತಪ್ಪು ಮಾಡದೇ ಇದ್ರೆ ಜೆಡಿಎಸ್ನಿಂದ ಅಮಾನತು ಮಾಡಿದ್ದು ಯಾಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ನಮ್ಮ ಸರ್ಕಾರವು ಒಂದು ವರ್ಷದ ಆಡಳಿತವನ್ನು ಯಶಸ್ವಿಯಾಗಿ ಪೂರೈಸಿದೆ
ಅಭಿವೃದ್ಧಿ ಮತ್ತು ಜನರ ಕಲ್ಯಾಣವನ್ನೇ ಮೂಲಮಂತ್ರವಾಗಿಟ್ಟುಕೊಂಡಿರುವ ನಮ್ಮ ಸರ್ಕಾರವು ಒಂದು ವರ್ಷದ ಆಡಳಿತವನ್ನು ಯಶಸ್ವಿಯಾಗಿ ಪೂರೈಸಿದೆ. ಈ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ನಾಡಿನ ಅಭಿವೃದ್ಧಿಯ ರಥವನ್ನು ಸಮಾನವಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ನುಡಿದಂತೆ ನಡೆಯುತ್ತಿರುವ ನಮಗೆ ನಿಮ್ಮ ಬೆಂಬಲ – ಸಹಕಾರ ಮುಂದೆಯೂ ಇರಲಿ ಎಂದು ಆಶಿಸುತ್ತಾ, ಈ ಒಂದು ವರ್ಷದ ಅವಧಿಯಲ್ಲಿ ನಮ್ಮ ಕೆಲವು ಪ್ರಮುಖ ಸಾಧನೆಗಳನ್ನು ನಿಮ್ಮ ಮುಂದೆ ಇಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.