
ವಿಜಯಪುರ: ಸೀರೆಯಿಂದ ಕತ್ತು ಬಿಗಿದುಕೊಂಡ ರೀತಿಯಲ್ಲಿ ಪತ್ನಿ ಹಾಗೂ ನೇಣು ಬಿಗಿದುಕೂಂಡ ರೀತಿಯಲ್ಲಿ ಪತಿ ಇಬ್ಬರೂ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ತಾಲುಕಿನ ಗೆದ್ದಲಮರಿ ಗ್ರಾಮದಲ್ಲಿ ನಡೆದಿದೆ.
ಸಿದ್ದಪ್ಪ ಹರನಾಳ ಹಾಗೂ ಪತ್ನಿ ಮೇಘಾ ಮೃತರು. ಎಂಟು ವರ್ಷಗಳ ಹಿಂದೆ ಸಿದ್ದಪ್ಪ ಹಾಗೂ ಮೇಘಾ ವಿವಾಹವಾಗಿದ್ದರು. ಸಿದ್ದಪ್ಪನೇ ಮೇಘಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಮೇಘಾಳ ತಾಯಿ ಅಳಿಯನೇ ಮಗಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ. ಸಿದ್ದಪ್ಪನ ತಾಯಿ ಶಾಂತಮ್ಮ ಹಾಗೂ ಸಹೋದರ ಶ್ರೀಕಾಂತ್ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು. ಈಗ ಪತ್ನಿಯೇನ್ನೇ ಕೊಂದಿದ್ದಾನೆ. ಮಕ್ಕಳು ಅನಾಥರಾಗಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ.
ಮುದ್ದೆಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.