ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ್ದಾನೆ.
ಬುಧವಾರ ರಾತ್ರಿ ಘಟನೆ ನಡೆದಿದೆ. ರಮ್ಯಾ(36) ಕೊಲೆಯಾದ ಮಹಿಳೆ. ಪತಿ ನಾಗಭೂಷಣ್ ಪತ್ನಿಯನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ನಾಗಭೂಷಣ್ ಆಟೋ ಚಾಲಕನಾಗಿದ್ದ, ಪತ್ನಿಯ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದಂಪತಿಗೆ 16 ವರ್ಷ ವಯಸ್ಸಿನ ಪುತ್ರ ಇದ್ದಾನೆ. ಪೊಲೀಸರು ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.