
ಬೆಂಗಳೂರು: ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ.
ಪತಿ ಮಹಾಶಯ ತನ್ನ ಪತ್ನಿಯನ್ನು ತುರೇಮಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನೆಲಮಂಗಲದ ಗೋರಿಬೆಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭಾಗ್ಯಮ್ಮ ಪತಿಯಿಂದಲೇ ಕೊಲೆಯಾದ ಮಹಿಳೆ.
ರಮೇಶ್ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.