ಶಿವಮೊಗ್ಗ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬ್ಲಿಗೊಳ ಗ್ರಾಮದಲ್ಲಿ ಘಟನೆ ನಡೆದಿದೆ
26 ವರ್ಷದ ಗೌರಮ್ಮ ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಮದ್ಯದ ಅಮಲಿನಲ್ಲಿ ಹಲ್ಲೆ ಮಾಡಿ ಕುತ್ತಿಗೆ ಬಿಗಿದು ಪತಿ ಮನೋಜ್ ಕೃತ್ಯವೆಸಗಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಶಿಕಾರಿಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.