ಮಂಗಳೂರು: ಪತ್ನಿ ಹಾಗೂ ಮಗನನ್ನು ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ.
ಕಾರ್ತಿಕ್ ಭಟ್ (32) ಎಂಬಾತ ಫ್ಲ್ಯಾಟ್ ನಲ್ಲಿ ಪತ್ನಿ ಪ್ರಿಯಾಂಕಾ (28) ಹಾಗೂ 4 ವರ್ಷದ ಮಗ ಹೃದಯ್ ನನ್ನು ಹತ್ಯೆಗೈದು ಬಳಿಕ ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಪ್ರಕರಣದ ತನಿಖೆ ವೇಳೆ ಶವ ಕಾರ್ತಿಕ್ ಭಟ್ ಎಂಬಾತನದ್ದು ಎಂದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಭಟ್ ಇದ್ದ ಫ್ಲ್ಯಾಟ್ ಗೆ ಪೊಲೀಸರು ಬಂದಾಗ ಫ್ಲ್ಯಾಟ್ ನಲ್ಲಿ ಪತ್ನಿ ಹಾಗೂ ಮಗ ಕೊಲೆಯಾಗಿರುವುದು ಪತ್ತೆಯಾಗಿದೆ. ಪತ್ನಿ ಹಗೂ ಮಗನನ್ನು ಕೊಂದು ಬಳಿಕ ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಮುಲ್ಕಿ ಪೊಲೀಸರು ತನಿಖೆ ನಡೆಸಿದ್ದಾರೆ.