ಬೆಂಗಳೂರು : ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ನೂರು ಕೋಟಿ ರೂ. ಮೇಲು ಹಗರಣಗಳಾದಾಗ ಪ್ರಕರಣ ಸಿಬಿಐಗೆ ವರ್ಗಾವಣೆಯಾಗುತ್ತದೆ. ಈಗ ಸಿಐಡಿಯವರು ತನಿಖೆ ಆರಂಭಿಸಿದ್ದಾರೆ. 100 ಕೋಟಿ ರೂ. ಅಧಿಕ ಅಕ್ರಮ ನಡೆದಿದೆಯೋ..? ಇಲ್ಲವೋ ಎಂಬುದು ಸಿಐಡಿ ತನಿಖೆಯಿಂದ ಗೊತ್ತಾಗಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ತಿಳಿಸಿದರು.
ಈ ಪ್ರಕರಣವನ್ನು ಸದ್ಯಕ್ಕೆ ಸಿಬಿಐಗೆ ವಹಿಸಲ್ಲ, ಅಂತಹ ಸಮಯ ಬಂದರೆ ಸಿಎಂ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವರು ಹೇಳಿದರು.