ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕ 6,000 ರೂ ಸಹಾಯಧನ ನೀಡಲಾಗುತ್ತಿದೆ. ಇದನ್ನು 8000 ರೂ.ಗೆ ಹೆಚ್ಚಳ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಸಂಸತ್ ನಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಉತ್ತರ ನೀಡಿ, ಪಿಎಂ ಕಿಸಾನ್ ಯೋಜನೆ ಹಣ ಹೆಚ್ಚಳ ಮಾಡುವ ಪ್ರಸ್ತಾಪವಿಲ್ಲ. ಈ ಯೋಜನೆಯಡಿ ರೈತರಿಗೆ ವಾರ್ಷಿಕ 6,000 ರೂ. ನೀಡುತ್ತಿದ್ದು, ಇದು ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಪಿಎಂ ಕಿಸಾನ್ ಯೋಜನೆಯಡಿ ನೀಡಲಾಗುತ್ತಿರುವ 6000 ರೂ. ಬದಲಿಗೆ 8,000 ರೂ. ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿತ್ತು. ಆದರೆ, ಇದನ್ನು ಅಲ್ಲಗಳೆದ ಸಚಿವರು ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು ತಿಳಿಸಿದ್ದಾರೆ.