ಬೆಂಗಳೂರು : ವರ್ಗಾವಣೆ ಸಂಬಂಧ ಒಂದೇ ಒಂದು ಪ್ರಕರಣದಲ್ಲಿ ಲಂಚ ತೆಗೆದುಕೊಂಡಿರುವುದು ಸಾಬೀತಾದ್ರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ದುಡ್ಡು ತೆಗೆದುಕೊಂಡು ವರ್ಗಾವಣೆ ಮಾಡಿಲ್ಲ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ನೂರು ಟ್ವೀಟ್ ಮಾಡಲಿ, ಅದಕ್ಕೆಲ್ಲ ಪ್ರಕ್ರಿಯಿಸಬೇಕಿಲ್ಲ. ಅವರ ಕಾಲದಲ್ಲಿ ವರ್ಗಾವಣೆ, ಹಣದ ವ್ಯವಹಾರ ಮಾಡಿದ್ದನ್ನು ಈಗ ಹೇಳುತ್ತಿದ್ದಾರೆ ಎಂದರು.
ಇನ್ನು ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅನ್ನ ಹಳಸಿತ್ತು. ನಾಯಿ ಹಸಿದಿತ್ತು ಎಂದು ಹೇಳುವ ಮೂಲಕ ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ವ್ಯಂಗ್ಯವಾಡಿದ್ದಾರೆ.