ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ಧ್ವಂಸ ಹಾಗೂ ಕಿಡಿಗೇಡಿಗಳಿಂದ ವಾಹನಗಳ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸರಿಗೆ ಸೂಚಿಸಿದ್ದಾರೆ.
ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿರುವ ನಡುವೆಯೇ ಕುಂದಾನಗರಿ ಬೆಳಗಾವಿಯಲ್ಲಿ ಹಿಂಸಾಚಾರ ನಡೆದಿದ್ದು, ಆನಗೋಳದಲ್ಲಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಅಲ್ಲದೇ ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ 27 ಆರೋಪಿಗಳನ್ನು ಬಂಧಿಸಲಾಗಿದೆ.
ವ್ಯಕ್ತಿಯೊಬ್ಬನ ಮೂತ್ರಪಿಂಡದಿಂದ ದಾಖಲೆಯ 156 ಕಲ್ಲುಗಳನ್ನು ಹೊರತೆಗೆದ ವೈದ್ಯರು..!
ಈ ಕುರಿತು ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಬೆಳಗಾವಿಯಲ್ಲಿ ಕೆಲ ಪುಂಡರು ಈ ರೀತಿ ಮಾಡುತ್ತಿದ್ದಾರೆ. ಕಿಡಿಗೇಡಿಗಳ ಪುಂಡಾಟವನ್ನು ಹತ್ತಿಕ್ಕಬೇಕಾದ ಅಗತ್ಯವಿದೆ. ಈಬಾರಿ ತಪ್ಪಿತಸ್ಥರಿಗೆ ಭಯ ಹುಟ್ಟಿಸುತ್ತೇವೆ. ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಪೊಲೀಸರು ಕೈಗೊಳ್ಳುವ ಕ್ರಮದ ಬಗ್ಗೆ ಕಾದು ನೋಡಿ ಎಂದು ಹೇಳಿದ್ದಾರೆ.