
ನಾನು ಇನ್ಮುಂದೆ ಕಾಂಗ್ರೆಸ್ಗಾಗಿ ಕೆಲಸ ಮಾಡಲಿದ್ದೇನೆ. ಹಾಗೂ ಮುಂದಿನ ಬಾರಿ ಉತ್ತರಾಖಂಡ್ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹರಕ್ ಸಿಂಗ್ ಭವಿಷ್ಯ ನುಡಿದಿದ್ದಾರೆ.
ಕಾಂಗ್ರೆಸ್ ಪಕ್ಷವು ಉತ್ತರಾಖಂಡ್ನಲ್ಲಿ ಸರ್ಕಾರವನ್ನು ರಚಿಸಲಿದೆ. ನಾನು ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡಲಿದ್ದೇನೆ. ಬಿಜೆಪಿ ಎಂದಿಗೂ ಜನಸಾಮಾನ್ಯನ ಕಷ್ಟವನ್ನು ಅರ್ಥ ಮಾಡಿಕೊಂಡಿಲ್ಲ. ಕಾಂಗ್ರೆಸ್ ಪಕ್ಷವು ತುಂಬಾನೇ ಚೆನ್ನಾಗಿದೆ. ಕಾಂಗ್ರೆಸ್ ಜನರಿಗಾಗಿ ಏನನ್ನು ಮಾಡುತ್ತಿದೆ ಎಂಬುದು ತಿಳಿದಿದೆ. ನಾನು ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುವಾಗ ರಾವತ್ ಕಣ್ಣೀರು ಒರೆಸುತ್ತಿರುವುದನ್ನು ಕಾಣಬಹುದಾಗಿದೆ. ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು, ರಾಜ್ಯ ಸಚಿವ ಹರಕ್ ಸಿಂಗ್ ರಾವತ್ ಅವರನ್ನು ಭಾನುವಾರ ಸಂಪುಟದಿಂದ ವಜಾಗೊಳಿಸಿದ್ದಾರೆ.