alex Certify ದಂಗಾಗಿಸುವಂತಿದೆ ‘ಪುಷ್ಪಾ 2’ ಚಿತ್ರದ ಐದು ದಿನದ ಕಲೆಕ್ಷನ್….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಂಗಾಗಿಸುವಂತಿದೆ ‘ಪುಷ್ಪಾ 2’ ಚಿತ್ರದ ಐದು ದಿನದ ಕಲೆಕ್ಷನ್….!

ಸುಕುಮಾರ್ ನಿರ್ದೇಶನದ, ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ 2’  ಒಂದರ ಮೇಲೊಂದು ದಾಖಲೆ ಬರೆಯುತ್ತಿದ್ದು,  ಭಾರತದಲ್ಲೆಡೆ ಭರ್ಜರಿ ಸೌಂಡ್ ಮಾಡುತ್ತಿದೆ. ಈ ಚಿತ್ರ ಇದೀಗ ಕೇವಲ ಐದು ದಿನಗಳಲ್ಲಿ  922 ಕೋಟಿ ರೂ. ಗಳಿಕೆ ಮಾಡುವ ಮೂಲಕ  ನಿಬ್ಬೆರಗಾಗುವಂತೆ ಮಾಡಿದೆ. ಡಾರ್ಲಿಂಗ್ ಪ್ರಭಾಸ್ ಅಭಿನಯದ ‘ಬಾಹುಬಲಿ 2’ ಹತ್ತು ದಿನಗಳಲ್ಲಿ 1000 ಕೋಟಿ ರೂ. ಕಲೆಕ್ಷನ್ ಮಾಡಿತ್ತು. ಇದನ್ನು ಸರಿಗಟ್ಟುವ ಮೂಲಕ ‘ಪುಷ್ಪಾ 2’ ಹೊಸ ದಾಖಲೆ ಬರೆಯಲು ಸಜ್ಜಾಗಿದೆ.

ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ನವೀನ್ ಯೆರ್ನೇನಿ, ಲಮಂಚಿಲಿ ರವಿಶಂಕರ್ ನಿರ್ಮಾಣ ಮಾಡಿದ್ದು, ಅಲ್ಲು ಅರ್ಜುನ್ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ.

ಇನ್ನುಳಿದಂತೆ ಫಹಾದ್ ಫಾಸಿಲ್, ಜಗಪತಿ ಬಾಬು, ಸುನಿಲ್, ಅನಸೂಯಾ ಭಾರದ್ವಾಜ್, ರಾವ್ ರಮೇಶ್, ಸತ್ಯ, ಸೌರಭ್ ಸಚ್‌ದೇವ, ಆಂಚಲ್ ಮುಂಜಾಲ್, ಆದಿತ್ಯ ಮೆನನ್, ಬ್ರಹ್ಮಾಜಿ, ದಯಾನಂದ ರೆಡ್ಡಿ ಉಳಿದ  ಪಾತ್ರ ವರ್ಗದಲ್ಲಿದ್ದಾರೆ. ದೇವಿಶ್ರೀ ಪ್ರಸಾದ್ ಸಂಗೀತ ಸಂಯೋಜನೆ ನೀಡಿದ್ದು, ನವೀನ್ ನೂಲಿ ಸಂಕಲನ ಹಾಗೂ ಮಿರೋಸ್ಲಾವ್ ಕುಬಾ ಬ್ರೋಜೆಕ್ ಛಾಯಾಗ್ರಾಹಣವಿದೆ.

Icon Star @alluarjun @iamRashmikapic.twitter.com/wXO9GmcTt9

— Mythri Movie Makers (@MythriOfficial) December 10, 2024

 

 

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...