![](https://kannadadunia.com/wp-content/uploads/2021/10/rain-cyclone-nivar.jpg)
ಬೆಂಗಳೂರು: ಶ್ರೀಲಂಕಾ ಕರಾವಳಿ ಪ್ರದೇಶ ಮತ್ತು ನೈರುತ್ಯ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ.
ಇದರ ಪರಿಣಾಮ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗ್ತಿದೆ. ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣವಿದೆ. ಇದರೊಂದಿಗೆ ಬೆಂಗಳೂರು ಸೇರಿ ಕೆಲವೆಡೆ ಸಾಧಾರಣ ಮಳೆಯಾಗಿದೆ.
ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರ್ನಾಟಕದ ಪೂರ್ವ ಭಾಗದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ರಾಜ್ಯಾದ್ಯಂತ ಇಂದು ಮತ್ತು ನಾಳೆ ಮಳೆಯಾಗಲಿದೆ.
ದಕ್ಷಿಣ ಒಳನಾಡು ಪ್ರದೇಶ, ಬೆಂಗಳೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.