ಬೆಂಗಳೂರು: ನಿವಾರ್ ಚಂಡಮಾರುತದ ಪರಿಣಾಮ ತಾಪಮಾನದಲ್ಲಿ ಏರಿಳಿತವಾಗಿ ರಾಜ್ಯದ ಅನೇಕ ಭಾಗದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಇನ್ನು ಮೂರು ದಿನಗಳ ಕಾಲ ಬಾಧಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಯಚೂರು, ಕೊಪ್ಪಳ, ಹಾವೇರಿ, ಕಲಬುರ್ಗಿ, ಬೀದರ್, ವಿಜಯಪುರ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಸುಮಾರು 6 ಡಿಗ್ರಿ ಸೆಲ್ಸಿಯಸ್ ವರೆಗೂ ಇಳಿಕೆಯಾಗಿದೆ. ಅದೇ ರೀತಿ ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಭಾಗದಲ್ಲಿ 3 ಡಿಗ್ರಿಯಷ್ಟು ಉಷ್ಣಾಂಶ ಕಡಿಮೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಕೂಡ ತಾಪಮಾನ ಕಡಿಮೆಯಾಗಿ ಚಳಿಯ ತೀವ್ರತೆ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.