ಬೆಂಗಳೂರು: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ.
ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ನಡೆಯಲಿದೆ. ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಚಳಿಗಾಲದ ಅಧಿವೇಶನ ಸಾಕ್ಷಿಯಾಗುವ ಸಾಧ್ಯತೆ ಇದೆ. ಅಧಿವೇಶನ ನಡೆಸುವ ಕುರಿತ ಸಚಿವ ಸಂಪುಟ ಸಭೆಯ ತೀರ್ಮಾನಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ಈ ಸಂಬಂಧ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಈಗಾಗಲೇ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬೆಳಗಾವಿಗೆ ಭೇಟಿ ನೀಡಿ ಎಲ್ಲಾ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಂತೆಯೇ ಅಧಿವೇಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.