alex Certify BIG NEWS: ಡಿ.7 ರಿಂದ ಸಂಸತ್ ಚಳಿಗಾಲದ ಅಧಿವೇಶನ; ಮಹತ್ವದ ಮಸೂದೆ ಅಂಗೀಕಾರ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ.7 ರಿಂದ ಸಂಸತ್ ಚಳಿಗಾಲದ ಅಧಿವೇಶನ; ಮಹತ್ವದ ಮಸೂದೆ ಅಂಗೀಕಾರ ಸಾಧ್ಯತೆ

ಸಂಸತ್ತಿನ ಚಳಿಗಾಲದ ಅಧಿವೇಶನ ಈ ವರ್ಷ ಡಿಸೆಂಬರ್ 7 ರಿಂದ ಡಿಸೆಂಬರ್ 29 ರವರೆಗೆ ನಡೆಯಲಿದೆ. ಮುಂಬರುವ ಚಳಿಗಾಲದ ಅಧಿವೇಶನವು ಒಟ್ಟು 17 ಕೆಲಸದ ದಿನಗಳನ್ನು ಹೊಂದಿರುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ರಾಜ್ಯಸಭೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧಂಕರ್ ಅವರು ಮೇಲ್ಮನೆಯಲ್ಲಿ ಕಲಾಪಗಳನ್ನು ನಿರ್ವಹಿಸುವ ಮೊದಲ ಅಧಿವೇಶನವಾಗಿದೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಚುನಾವಣಾ ಕಾವು ಇರುವಾಗಲೇ ಅಧಿವೇಶನ ಪ್ರಾರಂಭವಾಗಲಿದೆ.

ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ ಹಲವಾರು ಮಸೂದೆಗಳನ್ನು ಅಂಗೀಕರಿಸಲು ಸರ್ಕಾರ ಯೋಜಿಸುತ್ತಿದ್ದರೆ, ಪ್ರತಿಪಕ್ಷಗಳು ಅತ್ಯಗತ್ಯ ವಿಷಯಗಳ ಬಗ್ಗೆ ಚರ್ಚೆಗೆ ಒತ್ತಾಯಿಸುತ್ತಿವೆ. ಅಧಿವೇಶನದ ಮೊದಲ ದಿನ ನಿಧನರಾದ ಗಣದಯರಿಗೆ ಗೌರವ ಸಲ್ಲಿಸಲಿದ್ದಾರೆ.

ಮೂಲಗಳ ಪ್ರಕಾರ, ಕೋವಿಡ್ ಸೋಂಕಿನ ಪ್ರಕರಣಗಳಲ್ಲಿ ಕುಸಿತವಾಗಿದೆ. ಲೋಕಸಭೆ ಮತ್ತು ರಾಜ್ಯಸಭೆಯ ಹೆಚ್ಚಿನ ಸದಸ್ಯರು ಮತ್ತು ಸಿಬ್ಬಂದಿಗೆ ಸಂಪೂರ್ಣವಾಗಿ ಲಸಿಕೆ ಹಾಕಲಾಗಿದೆ. ಹೀಗಾಗಿ ಈ ಬಾರಿ ಅಧಿವೇಶನವು ಯಾವುದೇ ಕೋವಿಡ್ ನಿಯಮಗಳ ನಿರ್ಬಂಧಗಳಿಲ್ಲದೆ ಮುಂದುವರಿಯುವ ಸಾಧ್ಯತೆಯಿದೆ.

ಕಳೆದ ಎರಡು ವರ್ಷಗಳಲ್ಲಿ ಕೋವಿಡ್. ಸಂಸತ್ತಿನ ಅಧಿವೇಶನಗಳ ಮೇಲೆ ಪರಿಣಾಮ ಬೀರಿತ್ತು. ಏತನ್ಮಧ್ಯೆ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿರುವ ಕಾರಣ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಸಾಧ್ಯವಾಗದಿರಬಹುದು ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...