ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಯಲಿದೆ.
ಡಿ. 9ರಿಂದ 20ರವರೆಗಿನ ಅವಧಿಯಲ್ಲಿ ರಜಾ ದಿನ ಹೊರತುಪಡಿಸಿ 10 ದಿನಗಳ ಕಾಲ ಉಭಯ ಸದನಗಳ ಕಲಾಪ ನಡೆಸಲಾಗುವುದು. ಸ್ಪೀಕರ್ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಅವರು ಬೆಳಗಾವಿ ಸುವರ್ಣಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಬೆಳಗಾವಿ ಜಿಲ್ಲಾಡಳಿತ ಇದ್ದೆ ಈಗಾಗಲೇ ಸೂಚನೆ ನೀಡಲಾಗಿದೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಬಗ್ಗೆ ಅಧಿಕೃತ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.