
ಬೆಂಗಳೂರು: ರಾಜ್ಯದಲ್ಲಿ ಚಳಿಯ ತೀವ್ರತೆಗೆ ಜನ ತತ್ತರಿಸಿ ಹೋಗಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಜನವರಿ ಅಂತ್ಯದವರೆಗೆ ರಾಜ್ಯದಾದ್ಯಂತ ಚಳಿಯ ವಾತಾವರಣ ಮುಂದುವರೆಯಲಿದೆ. ನಂತರ ಕಡಿಮೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಜನವರಿಯಲ್ಲಿ ಚಳಿ ಹೆಚ್ಚಾಗಿರಲಿದ್ದು. ಮಾಸಾತ್ಯದವರೆಗೂ ಇದೇ ಸ್ಥಿತಿ ಮುಂದುವರೆಯಲಿದೆ. ನಂತರದಲ್ಲಿ ಚಳಿಯ ತೀವ್ರತೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಹೇಳಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 10 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.