
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,63,533 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಸೋಂಕಿತರ ಸಂಖ್ಯೆ 2,52,28,996 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,329 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಕೊರೋನಾಗೆ ಮೃತಪಟ್ಟವರ ಸಂಖ್ಯೆ 2,78,719 ಕ್ಕೆ ಏರಿಕೆಯಾಗಿದೆ.
33,53,765 ಸಕ್ರಿಯ ಪ್ರಕರಣಗಳಿವೆ. 4,22,436 ಮಂದಿ ಬಿಡುಗಡೆಯಾಗಿದ್ದು, ಇದುವರೆಗೆ 2,15,96,512 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 18,44,53,149 ಮಂದಿಗೆ ಲಸಿಕೆ ನೀಡಲಾಗಿದೆ.