ರೂರ್ಕಿ: ಉತ್ತರಾಖಂಡ್ ನ ಹರಿದ್ವಾರ ಜಿಲ್ಲೆಯ ರೂರ್ಕಿ ಪಟ್ಟಣದಲ್ಲಿ ಮಹಿಳೆ ಮತ್ತು ಆಕೆಯ ಆರು ವರ್ಷದ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.
ವ್ಯಕ್ತಿಯೊಬ್ಬ ಮತ್ತು ಆತನ ಸ್ನೇಹಿತರು ಕಾರ್ ನಲ್ಲಿ ಲಿಫ್ಟ್ ನೀಡಿದ ನಂತರ ಚಲಿಸುವ ಕಾರಿನಲ್ಲಿಯೇ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಮಹಿಳೆಯು ಮುಸ್ಲಿಂ ಧಾರ್ಮಿಕ ಕ್ಷೇತ್ರವಾದ ಪಿರಾನ್ ಕಲಿಯಾರ್ ನಿಂದ ರಾತ್ರಿ ತನ್ನ ಆರು ವರ್ಷದ ಮಗಳೊಂದಿಗೆ ಮನೆಗೆ ಹೋಗುತ್ತಿದ್ದಾಗ ವ್ಯಕ್ತಿಯೊಬ್ಬರು ಲಿಫ್ಟ್ ನೀಡಿದ್ದಾರೆ.
ಸೋನು ಎಂದು ಗುರುತಿಸಲಾದ ವ್ಯಕ್ತಿಯ ಕೆಲವು ಸ್ನೇಹಿತರು ಕಾರ್ ನಲ್ಲಿದ್ದರು ಎಂದು ಪೊಲೀಸ್ ಸೂಪರಿಂಟೆಂಡೆಂಟ್(ಗ್ರಾಮೀಣ) ಪ್ರಮೇಂದ್ರ ದೋವಲ್ ಹೇಳಿದ್ದಾರೆ. ಸೋನು ಮತ್ತು ಆತನ ಸಹಚರರು ಚಲಿಸುತ್ತಿದ್ದ ಕಾರ್ ನಲ್ಲಿ ತನ್ನ ಹಾಗೂ ಮಗಳ ಮೇಲೆ ಅತ್ಯಾಚಾರ ಎಸಗಿ ಕಾಲುವೆ ಬಳಿ ಎಸೆದಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.
ಮಧ್ಯರಾತ್ರಿ ಪೊಲೀಸ್ ಠಾಣೆಗೆ ತಲುಪಿದ ಮಹಿಳೆ ಪೊಲೀಸರಿಗೆ ಘಟನೆಯನ್ನು ವಿವರಿಸಿದ್ದಾರೆ. ಇಬ್ಬರನ್ನು ರೂರ್ಕಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದು, ಇದುವರೆಗೂ ಪತ್ತೆಯಾಗಿಲ್ಲ.