alex Certify Video | ಮೆಟ್ರೋ ಸೇತುವೆ ಮೇಲಿಂದ ಹಾರಲೆತ್ನಿಸಿದ ಯುವತಿ; ಪೊಲೀಸರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Video | ಮೆಟ್ರೋ ಸೇತುವೆ ಮೇಲಿಂದ ಹಾರಲೆತ್ನಿಸಿದ ಯುವತಿ; ಪೊಲೀಸರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರು…!

article-image

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು, ಇದರಲ್ಲಿ ಮೆಟ್ರೋ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಯುವತಿಯನ್ನು ಪೊಲೀಸರು ಸಮಯ ಪ್ರಜ್ಞೆ ಮೆರೆದು ರಕ್ಷಿಸಿದ್ದಾರೆ. ಇಂತಹುದೊಂದು ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ.

ಹಾಡಹಗಲೇ ಈ ಯುವತಿ ಮೆಟ್ರೋ ಸೇತುವೆ ಮೇಲೇರಿದ್ದು, ಮೊಬೈಲ್ ನಲ್ಲಿ ಯಾರೊಂದಿಗೋ ಮಾತನಾಡುತ್ತಲೇ ಹಾರಲು ಮುಂದಾಗಿದ್ದಾಳೆ. ಈ ದೃಶ್ಯವನ್ನು ನೋಡಿದ ಜನ ಹಾಗೆ ಮಾಡದಂತೆ ಕೂಗಿ ಕೂಗಿ ಎಚ್ಚರಿಸಿದ್ದಾರೆ. ಅಲ್ಲದೆ ಪೊಲೀಸರಿಗೂ ವಿಷಯ ಮುಟ್ಟಿಸಿದ್ದಾರೆ.

ತಕ್ಷಣವೇ ಎಚ್ಚೆತ್ತ ಪೊಲೀಸರು ಮೆಟ್ರೋ ರೈಲಿನ ಮೂಲಕವೇ ಯುವತಿಯನ್ನು ಸಮೀಪಿಸಿದ್ದಾರೆ. ಆ ಸಂದರ್ಭದಲ್ಲಿ ಇನ್ನೇನು ಆಕೆ ಮೇಲಿನಿಂದ ಹಾರುತ್ತಾಳೆ ಎನ್ನುವಾಗ ಆಕೆಯನ್ನು ಹಿಡಿದು ರಕ್ಷಿಸಿದ್ದಾರೆ. ಈ ಯುವತಿ ಯಾರು ? ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಳು ? ಎಂಬುದರ ಕುರಿತು ಹೆಚ್ಚಿನ ವಿವರ ಲಭ್ಯವಾಗಿಲ್ಲ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...