ಮಂಗಳೂರು: ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಧರ್ಮಸ್ಥಳದ ಮಹಿಳೆ ಹಲ್ಲೆಗೊಳಗಾದವರು. ನವೀನ್ ಕನ್ಯಾಡಿ ಎಂಬಾತನಿಗೆ 7 ಲಕ್ಷ ರೂಪಾಯಿ ಸಾಲ ನೀಡಿದ್ದ ಮಹಿಳೆ ಹಣ ವಾಪಸ್ ಕೇಳಿದ್ದಕ್ಕೆ ಅವರ ಬಟ್ಟೆ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಲಾಗಿದೆ. ಹೂವಿನ ವ್ಯಾಪಾರಿಯಾಗಿರುವ ನವೀನ್ ಕನ್ಯಾಡಿ ಬಿಜೆಪಿ ಕಾರ್ಯಕರ್ತನಾಗಿದ್ದು, ಸಾಲದ ಹಣ ವಾಪಸ್ ಕೇಳಿದ್ದ ಮಹಿಳೆ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ.
ಹಲ್ಲೆಗೊಳಗಾದ ಮಹಿಳೆ ಉಜಿರೆಯ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಬಳಿಕ ಮಹಿಳೆ ದೂರು ನೀಡಿದ್ದು, ಬೆಳ್ತಂಗಡಿ ಠಾಣೆ ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ.