ಮಹೋಬಾ: ಗಂಡು ಮಗುವನ್ನು ಹೆರಲಿಲ್ಲ ಎಂಬ ಕಾರಣಕ್ಕೆ 31 ವರ್ಷದ ಮಹಿಳೆಯೊಬ್ಬಳನ್ನು ಆಕೆಯ ಪತಿ ಮತ್ತು ಅತ್ತೆ ಅಮಾನುಷ ಹಲ್ಲೆ ನಡೆಸಿ, ಅರೆಪ್ರಜ್ಞಾವಸ್ಥೆಗೆ ತಳ್ಳಿದ್ದಾರೆ. ಹಲ್ಲೆ ನಡೆಸಲು ಮರ ಕೋಲನ್ನು ಬಳಸಿದ್ದರು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಮನಗರ ಜುಖಾ ಪ್ರದೇಶದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಹಲ್ಲೆಯ ಬಳಿಕ ಮಹಿಳೆಯನ್ನು ಮನೆಯಿಂದ ಹೊರ ಹಾಕಿದ ಅತ್ತೆ ಮತ್ತು ಪತಿ ಸ್ಥಳದಿಂದ ಪರಾರಿಯಾಗಿದ್ದಾರೆ. ಏಳು ಮತ್ತು ಎರಡು ವರ್ಷದ ಇಬ್ಬರು ಹೆಣ್ಣು ಮಕ್ಕಳ ತಾಯಿಯಾಗಿರುವ ಆಕೆಯ ಸ್ಥಿತಿ ಗಂಭೀರವಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಮಹೋಬಾ ಪೊಲೀಸ್ ವರಿಷ್ಠಾಧಿಕಾರಿ ಸುಧಾ ಸಿಂಗ್ ತಿಳಿಸಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ
ಗಂಡು ಮಗುವನ್ನು ಹೆರಲಿಲ್ಲ ಎಂಬ ಕಾರಣಕ್ಕೆ ಅತ್ತೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಪತಿ ತನ್ನ ಖಾಸಗಿ ಭಾಗಗಳಿಗೆ ಮರದ ಕೋಲನ್ನು ತೂರಿ ಅಮಾನುಷವಾಗಿ ವರ್ತಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾಳೆ.
ದೂರಿನ ಆಧಾರದ ಮೇಲೆ, ಮಹಿಳೆಯ ಪತಿ ಮತ್ತು ಅತ್ತೆಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆಗೆ ಯತ್ನ) ಪ್ರಕಾರ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ಶೋಧ ಮುಂದುವರಿದಿದೆ ಎಂದು ಸುಧಾ ಸಿಂಗ್ ಹೇಳಿದರು.