
ಮೈಸೂರು: ಬಾಳೆ ತೋಟದಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ.
ಗಟ್ಟವಾಡಿ ಗ್ರಾಮದ ಶಶಿಕಲಾ (38) ಮೃತ ಮಹಿಳೆ. ಗಟ್ಟವಾಡಿ ಗ್ರಾಮದ ನಂಜುಂಡಪ್ಪ ಅಲಿಯಾಸ್ ಸಿದ್ದಲಿಂಗಪ್ಪ ಎಂಬುವವರ ಬಾಳೆ ತೋಟದಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಅತ್ಯಾಚರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ನಂಜುಂಡಪ್ಪ ನಾಪತ್ತೆಯಾಗಿದ್ದಾನೆ. ಘಟನಾ ಸ್ಥಳಕ್ಕೆ ನಂಜನಗೂಡು ಡಿವೈ ಎಸ್ ಪಿ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.