ಕಾರವಾರ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣ ಬಳಿ ನಡೆದಿದೆ.
ಸುಮಾರು 35 ವರ್ಷದ ಮಹಿಳೆ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಮಹಿಳೆಯನ್ನು ಕೊಲೆ ಮಾಡಿ ಬಳಿಕ ಶವ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.