alex Certify BIG NEWS: ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಬಂಡೆ; ಮಹಿಳೆ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಬಂಡೆ; ಮಹಿಳೆ ದುರ್ಮರಣ

ತಿರುವನಂತಪುರಂ: ರಸ್ತೆ ಬಳಿ ನಿಲ್ಲಿಸಿದ್ದ ಕಾರಿನ ಮೇಲೆ ಬಂಡೆ ಉರುಳಿಬಿದ್ದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಕೇರಳದ ಕುಟ್ಟಿಕ್ಕಾನಂ ವಲಂಜಗನಂ ನಲ್ಲಿ ನಡೆದಿದೆ.

ಇಡುಕ್ಕಿ ನಿವಾಸಿ ಸೋಮಿನಿ (66) ಮೃತ ಮಹಿಳೆ. ಮಹಿಳೆ ಕುಟುಂಬದ ಜೊತೆ ಕಾರಿನಲ್ಲಿ ತೆರಳುತ್ತಿದ್ದಾಗ ರಸ್ತೆಬದಿ ಕಾರು ನಿಲ್ಲಿಸಿದ್ದರು. ಈ ವೇಳೆ ಏಕಾಏಕಿ ಬೃಹತ್ ಬಂಡೆ ಕಾರಿನ ಮೇಲೆ ಉರುಳಿದೆ. ಸೋಮಿನಿ ಕಾರಿನಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರನ್ನು ರಕ್ಷಿಸಲಾಗಿದೆ.

ರಸ್ತೆ ಬಳಿ ಕಾರು ನಿಲ್ಲಿಸಿದ ಸಂದರ್ಭದಲ್ಲಿಯೇ ಭೂಕುಸಿತವುಂಟಾಗಿದೆ. ಈ ವೇಳೆ ಬಂಡೆ ಕಾರಿನ ಮೇಲೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಕುಟುಂಬ ಪ್ರವಾಸಕ್ಕಾಗಿ ತೆರಳುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...