
ಕಾರಿನ ಮೇಲೆ ಮರ ಬಿದ್ದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.
57 ವರ್ಷದ ಈ ಮಹಿಳೆ ತನ್ನ ಕಚೇರಿಯಿಂದ ಮನೆಗೆ ಮರಳುತ್ತಿದ್ದ ವೇಳೆ ಕೆ ಕೆ ನಗರದಲ್ಲಿ ಮರ ಕಾರಿನ ಮೇಲೆ ಬಿದ್ದಿದೆ. ಇದರ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಳೆದ ಕೆಲವು ದಿನಗಳಿಂದ ಚೆನ್ನೈನಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಇಂತಹ ಅವಘಡಗಳು ಸಂಭವಿಸುತ್ತಲೇ ಇವೆ.
