
ಉಡುಪಿ: ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಕೊಕ್ಕರ್ಣೆ ಪಂಚಾಯತ್ ಸಮೀಪ ನಡೆದಿದೆ.
ಲಕ್ಕಮ್ಮ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಜನವರಿ 14ರಂದು ಮನೆಯ ಸಮೀಪದ ಗದ್ದೆಯಲ್ಲಿ ತರಕಾರಿ ಗಿಡಗಳ ನಡುವೆ ಕಳೆ ಕೀಳುವಾಗ ಅವರ ಪಾದಕ್ಕೆ ನಾಗರಹಾವು ಕಚ್ಚಿದೆ. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು,
ಆದರೆ, ಚಿಕಿತ್ಸೆ ಫಲಕಾರಿಯಾಗದೇ ಜನವರಿ 27ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.