ಚೆನ್ನೈ: ತಮಿಳುನಾಡಿನ ಕಾಂಚೀಪುರಂ ಪೊಲೀಸರು ಚಲಿಸುತ್ತಿದ್ದ ಕಾರ್ ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಐದು ಮಂದಿಯನ್ನು ಬಂಧಿಸಿದ್ದಾರೆ.
ಮೊಬೈಲ್ ಫೋನ್ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿರುವ 20 ವರ್ಷದ ಮಹಿಳೆ ಪರಿಚಯಸ್ಥ ವ್ಯಕ್ತಿಯನ್ನು ಭೇಟಿಯಾಗಲು ತೆರಳಿದ್ದು, ಈ ವೇಳೆ ಆಕೆಗೆ ಮತ್ತು ಬರುವ ಪಾನೀಯ ನೀಡಿದ ಪರಿಚಯಸ್ಥ ತನ್ನ ಸ್ನೇಹಿತರೊಂದಿಗೆ ಸೇರಿ ಚಲಿಸುವ ಕಾರ್ ನಲ್ಲಿ ಅತ್ಯಾಚಾರ ಎಸಗಿದ್ದಾನೆ.
ಕಾಂಚಿಪುರಂ ನಗರದ ರಸ್ತೆಗಳಲ್ಲಿ ಆರೋಪಿಗಳು ಆಕೆಯ ಮೇಲೆ ಕಾರ್ ನಲ್ಲೇ ಸಾಮೂಹಿಕ ಅತ್ಯಾಚಾರವೆಸಗಿದ್ದು, ಆಕೆಗೆ ಪ್ರಜ್ಞೆ ಮರಳಿದ ನಂತರ ತಪ್ಪಿಸಿಕೊಳ್ಳಲು ಯತ್ನಿಸಿ, ಸಹಾಯಕ್ಕಾಗಿ ಕಿರುಚಾಡಿದ್ದಾಳೆ. ದಾರಿಹೋಕರು ನೆರವಿಗೆ ಧಾವಿಸಿ ಬರುವುದನ್ನು ಗಮನಿಸಿದ ಆರೋಪಿಗಳು ರಸ್ತೆಬದಿಯಲ್ಲಿ ಆಕೆಯನ್ನು ಎಸೆದು ಪರಾರಿಯಾಗಿದ್ದಾರೆ. ಕಾಂಚಿಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸೆ. 9 ರಂದು ನಾಲ್ವರನ್ನು ಬಂಧಿಸಿದ್ದು, ಮರುದಿನ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.