alex Certify ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ದಾವಣಗೆರೆ: ನಗರದ ಚಾಮರಾಜಪೇಟೆಯ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬರು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ವರ್ಲಹಳ್ಳಿಯ ಅನಿತಾ ಶನಿವಾರ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದು, 2 ಗಂಡು, ಒಂದು ಹೆಣ್ಣು ಮಗು ಜನಿಸಿವೆ. ತಾಯಿ, ಮಕ್ಕಳು ಆರೋಗ್ಯವಾಗಿದ್ದಾರೆ. ಈ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳ ಜನನವಾಗಿರುವುದು ಇದೇ ಮೊದಲು ಎಂದು ಹೇಳಲಾಗಿದೆ.

ನಾಲ್ಕೈದು ವರ್ಷಗಳಿಂದ ಅನಿತಾ ಅವರಿಗೆ ಮಕ್ಕಳಾಗಿರಲಿಲ್ಲ. ಗರ್ಭ ಧರಿಸಿದಾಗ ಸ್ಕ್ಯಾನಿಂಗ್ ನಲ್ಲಿ ಮೂರು ಮಕ್ಕಳಿರುವುದು ತಿಳಿದು ಬಂದಿತ್ತು. ಈ ಬಗ್ಗೆ ಅವರಿಗೆ ಮಾಹಿತಿ ನೀಡಲಾಗಿತ್ತು. ಫೆಬ್ರವರಿ 28ರಂದು ಸಂಜೆ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಸಹಜ ಹೆರಿಗೆ ಮಾಡಿಸಲು ಪ್ರಯತ್ನಿಸಲಾಗಿತ್ತು. ನಂತರ ಸಿಸೇರಿಯನ್ ಮಾಡಿ ಮಕ್ಕಳನ್ನು ಹೊರ ತೆಗೆಯಲಾಗಿದೆ ಎಂದು ಪ್ರಸೂತಿ ವೈದ್ಯರಾದ ಡಾ. ಮಹೇಶ್ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...