alex Certify ಬರೋಬ್ಬರಿ 84 ಕೋಟಿ ರೂ. ಮೌಲ್ಯದ ಹೆರಾಯಿನ್ ತರುತ್ತಿದ್ದ ಮಹಿಳೆ ಅಂದರ್….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬರೋಬ್ಬರಿ 84 ಕೋಟಿ ರೂ. ಮೌಲ್ಯದ ಹೆರಾಯಿನ್ ತರುತ್ತಿದ್ದ ಮಹಿಳೆ ಅಂದರ್….!

ಮಹತ್ವದ ಕಾರ್ಯಾಚರಣೆಯೊಂದರಲ್ಲಿ ರೆವಿನ್ಯೂ ಇಂಟಲಿಜೆನ್ಸ್ ನಿರ್ದೇಶನಾಲಯದ ಅಧಿಕಾರಿಗಳು ಹರಾರೆಯಿಂದ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮಹಿಳೆಯನ್ನು ಬಂಧಿಸಿ ಆಕೆಯಿಂದ ಬರೋಬ್ಬರಿ 84 ಕೋಟಿ ರೂ. ಮೌಲ್ಯದ ಹೆರಾಯಿನ್ ಪಶಪಡಿಸಿಕೊಂಡಿದ್ದಾರೆ.

ಮಂಗಳವಾರದಂದು ಈಕೆ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದ ವೇಳೆ ತಮಗೆ ದೊರೆತಿದ್ದ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಆಕೆಯ ಬ್ಯಾಗೇಜ್ ತಪಾಸಣೆ ನಡೆಸಿದಾಗ 11.94 ಕೆಜಿ ಹೆರಾಯಿನ್ ಅಡಗಿಸಿರುವುದು ಪತ್ತೆಯಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ 84 ಕೋಟಿ ರೂಪಾಯಿಗಳು ಎಂದು ಹೇಳಲಾಗಿದೆ.

ಬಳಿಕ ಆಕೆಯನ್ನು ಹೆಚ್ಚಿನ ವಿಚಾರಣೆ ನಡೆಸಿದಾಗ ಮುಂಬೈನ ಇಬ್ಬರಿಗೆ ಇದನ್ನು ತಲುಪಿಸಲು ಬಂದಿರುವುದಾಗಿ ಹೇಳಿದ್ದಾಳೆ. ನಂತರ ಈಕೆಯನ್ನು ಕರೆದೊಯ್ಯಲು ಬಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತಷ್ಟು ಮಂದಿ ಇದರಲ್ಲಿ ಶಾಮೀಲಾಗಿರುವ ಶಂಕೆಯಿಂದ ವಿಚಾರಣೆ ಮುಂದುವರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...