ಬೆಂಗಳೂರು: ಕೆಲಸದ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಸಿಹಿ ಸುದ್ದಿ ಇಲ್ಲಿದೆ. ವಿಶ್ವ ಒಕ್ಕಲಿಗರ ಮಹಾವೇದಿಕೆಯ ಮಹಿಳಾ ವಿಭಾಗ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆಯ ಸಹಯೋಗದಲ್ಲಿ ಜುಲೈ 17ರಂದು ಬೆಂಗಳೂರಿನ ಮಹಾಲಕ್ಷ್ಮಿ ಬಡಾವಣೆಯ ಬಿಜಿಎಸ್ ವರ್ಲ್ಡ್ ಶಾಲೆ ಆವರಣದಲ್ಲಿ ಮಹಿಳೆಯರಿಗೆ ಉದ್ಯೋಗ ಮೇಳ ಆಯೋಜಿಸಿದೆ.
ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಎಲ್ಲ ಜಾತಿ, ಧರ್ಮದ ಮಹಿಳೆಯರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. 100 ಕ್ಕಿಂತ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ನೇಮಕಾತಿ ಮಾಡಿಕೊಳ್ಳಲಿವೆ.
ಅರೆಕಾಲಿಕ, ಪೂರ್ಣಾವಧಿ ಕೆಲಸಗಳಿಗೆ ಸಂದರ್ಶನ ನಡೆಯಲಿದ್ದು, ಎಸ್.ಎಸ್.ಎಲ್.ಸಿ.ಯಿಂದ ಪದವಿ ಶಿಕ್ಷಣ ಪಡೆದ ಮಹಿಳೆಯರು ಭಾಗವಹಿಸಬಹುದಾಗಿದೆ. ವಿಕಲಚೇತನ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೌಂಟರ್ ಇರಲಿದೆ. ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಆಧಾರ್ ಕಾರ್ಡ್, ಎರಡು ಭಾವಚಿತ್ರ ಹಾಗೂ ಅನುಭವ ಪತ್ರಗಳೊಂದಿಗೆ ಆಗಮಿಸಬೇಕು. ವೈದ್ಯಕೀಯ ಸಿಬ್ಬಂದಿ ಮತ್ತು ಶಿಕ್ಷಕಿಯರಿಗೆ ಅವಕಾಶ ಇರುವುದಿಲ್ಲ. ಉದ್ಯೋಗ ಮೇಳದಲ್ಲಿ ಉದ್ಯೋಗ ಪಡೆಯಲು ವಿಫಲರಾದ ಅಭ್ಯರ್ಥಿಗಳನ್ನು ಗುರುತಿಸಿ ಅವರಿಗೆ ತರಬೇತಿ ನೀಡುವ ಉದ್ದೇಶವಿದೆ ಎಂದು ವಿಶ್ವ ಒಕ್ಕಲಿಗರ ಮಹಾವೇಕೆಯ ಮಹಿಳಾ ವಿಭಾಗದ ಅಧ್ಯಕ್ಷೆ ಭಾರತಿ ಶಂಕರ್ ತಿಳಿಸಿದ್ದಾರೆ.