ಹೈದರಾಬಾದ್: ಪೊಲೀಸ್ ಅಕಾಡೆಮಿಯ ಬಳಿ ನಿಂತಿದ್ದ ಮಹಿಳೆಯನ್ನು ಮೂವರು ಆರೋಪಿಗಳು ಅಪಹರಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ.
ಬುಧವಾರ ರಾತ್ರಿ ಹೈದರಾಬಾದ್ ನ ಹಿಮಾಯತ್ ಸಾಗರದಲ್ಲಿ ಆಟೋ ರಿಕ್ಷಾದಲ್ಲಿ ಮಹಿಳೆಯನ್ನು ಅಪಹರಿಸಲಾಗಿದೆ. ಮೂವರು ಆರೋಪಿಗಳು ಆಕೆಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.
ಆರೋಪಿಗಳು ಮಹಿಳಯಿಂದ ನಗದು ಮತ್ತು ಆಭರಣಗಳನ್ನು ಕಸಿದುಕೊಂಡು ಬಿಟ್ಟು ಕಳಿಸಿದ್ದಾರೆ. ನಂತರ ಸಂತ್ರಸ್ತೆ ರಾಜೇಂದ್ರನಗರ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾಳೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ಹಿಡಿಯಲು ವಿಶೇಷ ತಂಡಗಳನ್ನು ರಚಿಸಿದ್ದಾರೆ. ದುಷ್ಕರ್ಮಿಗಳನ್ನು ಗುರುತಿಸಲು ಈ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಸಹ ಪರಿಶೀಲಿಸಲಾಗುತ್ತಿದೆ.