ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯಾಗಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಮಹಿಳೆಯರು ಬಿತ್ತನೆ ಸೇರಿದಂತೆ ವಿವಿಧ ಚಟುವ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಇದರಿಂದಾಗಿ ಬಸ್ ನಲ್ಲಿ ಉಚಿತ ಪ್ರಯಾಣವಿದ್ದರೂ ಪ್ರವಾಸಿ ತಾಣಗಳಲ್ಲಿ ಮಹಿಳೆಯರ ಸಂಖ್ಯೆ ಇಳಿಮುಖವಾಗಿದೆ.
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ ನಂತರ ಧಾರ್ಮಿಕ ಕ್ಷೇತ್ರ ಮತ್ತು ಪ್ರವಾಸಿ ತಾಣಗಳಲ್ಲಿ ವಾರಾಂತ್ಯದಲ್ಲಿ ಭಾರಿ ದಟ್ಟಣೆ ಕಂಡು ಬರುತ್ತಿತ್ತು. ಈ ವಾರ ರಾಜ್ಯದ ಬಹುತೇಕ ಧಾರ್ಮಿಕ ಮತ್ತು ಪ್ರವಾಸಿ ತಾಣಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿ ಕಂಡುಬಂದಿಲ್ಲ.
ಕಳೆದ ವಾರ 40,000 ಭಕ್ತರು ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಮತ್ತು ಹುಲಿಗೆಮ್ಮ ದೇವಸ್ಥಾನಗಳಲ್ಲಿ ದರ್ಶನ ಪಡೆದುದ್ದರು. ಶಕ್ತಿ ಯೋಜನೆ ಆರಂಭವಾದ ನಂತರದ ವಾರಗಳಲ್ಲಿ ಸುಮಾರು ಒಂದು ಲಕ್ಷ ಭಕ್ತರು ಕಳೆದ ವಾರ ಭೇಟಿ ನೀಡಿದ್ದರು. ಈ ವಾರ 15 ಸಾವಿರದಷ್ಟು ಭಕ್ತರು ಭೇಟಿ ನೀಡಿದ್ದಾರೆ. ಅದೇ ರೀತಿ ಮಳೆಯಾಗಿ ಮಹಿಳೆಯರು ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವುದರಿಂದ ಪ್ರವಾಸಿ ತಾಣ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ಸಂಖ್ಯೆ ಇಳಿಮುಖವಾಗಿದೆ.