
ಬೆಳಗಾವಿ: ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೇವಲಾಪುರದಲ್ಲಿ ಕಡಲೆ ರಾಶಿ ಮಾಡುವ ವೇಳೆ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಮಹಾದೇವಿ ಮಲ್ಲಪ್ಪ ಗಣಾಚಾರಿ(45) ಮೃತಪಟ್ಟವರು ಎಂದು ಹೇಳಲಾಗಿದೆ. ಅವರಿಗೆ ಪತಿ, ಇಬ್ಬರು ಪುತ್ರರು, ಮತ್ತು ಪುತ್ರಿ ಇದ್ದಾರೆ. ತಮ್ಮ ಜಮೀನಿನಲ್ಲಿ ಕಡಲೆ ರಾಶಿ ಮಾಡುವಾಗ ಯಂತ್ರದೊಳಗೆ ಸಿಲುಕಿ ಒದ್ದಾಡಿದ್ದಾರೆ. ಕೂಡಲೇ ಕುಟುಂಬದವರು ಯಂತ್ರವನ್ನು ನಿಲ್ಲಿಸಿ ಮಹಿಳೆಯನ್ನು ಹೊರ ತೆಗೆದಿದ್ದು, ತೀವ್ರ ರಕ್ತಸ್ರಾವದಿಂದ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.