ಹಾಸನ: ಮಹಿಳೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ರೈಲು ನಿಲ್ದಾಣ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.
40 ವರ್ಷ ಆಸುಪಾಸಿನ ಅಪರಿಚಿತ ಮಹಿಳೆ ಶವವಾಗಿ ಪತ್ತೆಯಾಗಿದ್ದು, ಮಹಿಳೆಯ ಗುರುತು ಸಿಗಬಾರದು ಎಂಬಂತೆ ಆಕೆಯ ಮುಖವನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸಕ್ಕೆ ಹೋಗಿದ್ದಾಗ ಮಹಿಳೆ ಕೊಲೆಯಾಗಿರುವ ರೀತಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಹಾಸನ ನಗರ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.