alex Certify ವಶದಲ್ಲಿದ್ದ ಆರೋಪಿ ಜಾಮೀನಿಗೆ 15 ಸಾವಿರ ಲಂಚ ಪಡೆಯುತ್ತಿದ್ದ ಮಹಿಳಾ ಎಸ್ಐ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಶದಲ್ಲಿದ್ದ ಆರೋಪಿ ಜಾಮೀನಿಗೆ 15 ಸಾವಿರ ಲಂಚ ಪಡೆಯುತ್ತಿದ್ದ ಮಹಿಳಾ ಎಸ್ಐ ಲೋಕಾಯುಕ್ತ ಬಲೆಗೆ

ಬೆಂಗಳೂರು: ಆರೋಪಿಗೆ ಜಾಮೀನು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ 15,000 ರೂ. ಲಂಚ ಪಡೆಯುತ್ತಿದ್ದ ಮಹಿಳಾ ಪಿಎಸ್ಐ ಒಬ್ಬರು ಲೋಕಾಯುಕ್ತ ಪೊಲೀಸರಿಗೆ ಬಿದ್ದಿದ್ದಾರೆ.

ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಸವಿತಾ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು. ವಶದಲ್ಲಿದ್ದ ಆರೋಪಿಯ ಜಾಮೀನು ನೀಡುವ ವಿಚಾರದಲ್ಲಿ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 15 ಸಾವಿರ ರೂಪಾಯಿಗೆ ಮಾತುಕತೆ ನಡೆದು ಹಣ ಪಡೆದುಕೊಳ್ಳುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ದೂರುದಾರ ಅನಂತಕುಮಾರ್ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಲಂಚ ಪಡೆಯುತ್ತಿದ್ದ ಸವಿತಾ ಅವರನ್ನು ವಿರುದ್ಧ ಭ್ರಷ್ಟಾಚಾರ ನಿಗ್ರಹ ತಡೆ ಕಾಯ್ದೆಯಡಿ ಬಂಧಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...