
ಬೀದರ್: ವಿವಾಹಿತ ಮಹಿಳೆ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಬೀದರ್ ತಾಲೂಕಿನ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಹಿರ್ದೆಸೆಗೆ ತೆರಳಿದ್ದ ಮಹಿಳೆಯ ಮೇಲೆ ಯುವಕ ಅತ್ಯಾಚಾರವೆಸಗಿ ಕೊಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಜನವಾಡ ಪೊಲೀಸ್ ಠಾಣೆಯಲ್ಲಿ ಆರೋಪಿ ಯುವಕನ ವಿರುದ್ಧ ಅತ್ಯಾಚಾರ, ಕೊಲೆ ಯತ್ನ ಕೇಸ್ ದಾಖಲಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗಿದೆ.
ಸಂತ್ರಸ್ತ ಮಹಿಳೆಯನ್ನು ಬೀದರ್ ನ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.