ಜೈಪುರ: ರಾಜಸ್ಥಾನದ ಭರತ್ ಪುರ ಜಿಲ್ಲೆಯಲ್ಲಿ 25 ವರ್ಷದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಸ್ ಕಂಡಕ್ಟರ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಆರೋಪಿಯನ್ನು ಜಿತೇಂದ್ರ ಸಿಂಗ್ ಗುರ್ಜರ್(32) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಇಲ್ಲಿನ ಟ್ರಾನ್ಸ್ ಪೋರ್ಟ್ ನಗರ ಛೇದಕದಿಂದ ಭರತ್ ಪುರಕ್ಕೆ ತೆರಳುತ್ತಿದ್ದ ಬಸ್‌ಗೆ ಮಹಿಳೆ ಹತ್ತಿದ್ದರು. ಬಸ್ ಭರತ್‌ಪುರದ ಬಯಾನಾ ತಲುಪಿದ ನಂತರ ಗುರ್ಜರ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಬಯಾನಾ ಸರ್ಕಲ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಓಂಪ್ರಕಾಶ್ ಕಿಲಾನಿಯಾ ತಿಳಿಸಿದ್ದಾರೆ.
ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.