
ಪುಣೆ: ಮಹಾರಾಷ್ಟ್ರದ ವಾಶಿಮ್ ನಲ್ಲಿ ಚಲಿಸುತ್ತಿದ್ದ ಬಸ್ ನಲ್ಲಿ ಎರಡು ಬಾರಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.
ನಾಗ್ಪುರದಿಂದ ಪುಣೆಗೆ ಸಂಚರಿಸುತ್ತಿದ್ದ ಖಾಸಗಿ ಐಷಾರಾಮಿ ಬಸ್ ನಲ್ಲಿ ಮಹಿಳೆ ಮೇಲೆ ಕ್ಲೀನರ್ ಎರಡು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಗೆ ಬೆದರಿಕೆ ಹಾಕಿದ ಕ್ಲೀನರ್ ಅತ್ಯಾಚಾರ ಎಸಗಿರುವುದಾಗಿ ವಾಶಿಮ್ ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ಘಟನೆಯ ಬಗ್ಗೆ ತಿಳಿಸಿದ್ದಾರೆ. ಪುಣೆಯ ರಂಜಗಾಂವ್ ಪೊಲೀಸರಿಗೆ ಮಹಿಳೆ ವಿಷಯ ತಿಳಿಸಿದ್ದಾಳೆ. ವಾಶಿಮ್ ಜಿಲ್ಲೆಯಲ್ಲಿ ಘಟನೆ ನಡೆದ ಹಿನ್ನೆಲೆಯಲ್ಲಿ ದೂರನ್ನು ವಾಶಿಮ್ ನ ಮಾಲೆಗಾಂವ್ ಪೊಲೀಸರಿಗೆ ವರ್ಗಾಯಿಸಲಾಗಿದೆ.
ಸಂತ್ರಸ್ತೆ ಹೇಳಿಕೆ ಆಧರಿಸಿ ಶೂನ್ಯ ಎಫ್ಐಆರ್ ದಾಖಲಿಸಿದ್ದು, ಪ್ರಕರಣ ವರ್ಗಾಯಿಸಲಾಗಿದೆ ಎಂದು ರಂಜಗಾಂವ್ ಪೊಲೀಸರು ಮಾಹಿತಿ ನೀಡಿದ್ದಾರೆ.