ಅಹಮದಾಬಾದ್: ಗುಜರಾತ್ ನಲ್ಲಿ ತನ್ನ ಪತ್ನಿಯನ್ನು 500 ರೂ.ಗೆ ಮಾರಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಖರೀದಿಗೆ ಹಣ ನೀಡಿದ ಪುರುಷ ಏಕಾಂತ ಸ್ಥಳದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಶುಕ್ರವಾರ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ದೂರಿನ ಮೇಲೆ ತಕ್ಷಣ ಕ್ರಮ ಕೈಗೊಂಡು 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳಲ್ಲಿ ಒಬ್ಬನನ್ನು ಸೋನು ಶರ್ಮಾ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಠಾಣೆಯ ಪ್ರಭಾರಿ ಮದನಲಾಲ್ ಕದ್ವಸ್ರಾ ತಿಳಿಸಿದ್ದಾರೆ. 21 ವರ್ಷದ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ.
ಮಹಿಳೆಯನ್ನು 500 ರೂ.ಗೆ ಮಾರಿದ
ಮೌ ನಿವಾಸಿ ಮದುವೆಯಾಗಿದ್ದ ಮಹಿಳೆ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಲಕ್ಕಿ ಹೋಟೆಲ್‌ಗೆ ಹೋಗಿದ್ದರು. ಈ ಸಮಯದಲ್ಲಿ, ಸೋನು ಶರ್ಮಾ ಆ ಮಹಿಳೆಯ ಗಂಡನನ್ನು ಸಂಪರ್ಕಿಸಿ ಪತ್ನಿಗೆ ಬದಲಾಗಿ ಅವನಿಗೆ 500 ರೂ. ಕೊಡುವುದಾಗಿ ಹೇಳಿದ್ದಾನೆ. ಆರೋಪಿ ಹಣವನ್ನು ಸ್ವೀಕರಿಸಿ ತನ್ನ ಪತ್ನಿಯನ್ನು ಅವರಿಗೆ ಮಾರಿದ್ದಾನೆ. ಶರ್ಮಾ ಮಹಿಳೆಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದಾನೆ.
ಪ್ರಕರಣದ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು ಆರೋಪಿಯ ವಿರುದ್ಧ ಕ್ರಮ ಕೈಗೊಂಡು ಆತನನ್ನು ಬಂಧಿಸಿದ್ದಾರೆ. ಮಹಿಳೆಯನ್ನು ಸಿಕಾರಿನಲ್ಲಿರುವ ಸಖಿ ಕೇಂದ್ರಕ್ಕೆ ಕಳುಹಿಸಲಾಗಿದೆ.