alex Certify BIG NEWS : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮ-ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮ-ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ, ಯಾರೇ ತಪ್ಪು ಮಾಡಿದರೂ ಅದು ತಪ್ಪು. ಇಂತಹ ಘಟನೆಗಳನ್ನು ಸರ್ಕಾರ ಸಹಿಸಲ್ಲ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಂಟಮೂರಿ ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಗುಂಡಪ್ಪ ಎಂಬ 24 ವರ್ಷದ ಯುವಕ 18 ವರ್ಷದ ಪ್ರಿಯಾಂಕಾ ಎಂಬ ಯುವತಿಯನ್ನು ಪ್ರೀತಿಸಿ ಆಕೆಯೊಂದಿಗೆ ಓಡಿ ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ. ಯುವತಿ ಮನೆಯವರು ಯುವಕನ ಮನೆಗೆ ನುಗ್ಗಿ ಗಲಾಟೆ ಮಾಡಿ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...