ಬೆಳಗಾವಿ : ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 9 ಕ್ಕೇರಿಕೆಯಾಗಿದೆ.
ವಂಟಮೂರಿ ಗ್ರಾಮದಲ್ಲಿ ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿ ಪೋಷಕರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಪ್ರೀತಿಸಿದ್ದ ಯುವತಿ ಜೊತೆ ಓಡಿ ಹೋಗಿದ್ದ ಯುವಕನ ತಾಯಿಯನ್ನೇ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿತ್ತು.ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿ ಪೋಷಕರು ಯುವಕನ ತಾಯಿಯನ್ನು ಹೊರಕ್ಕೆ ಎಳೆದುಕೊಂಡು ಬಂದು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದರು.