ಬೆಳಗಾವಿ: ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ತನಿಖೆ ನಡೆಸಿ 12 ಆರೋಪಿಗಳ ವಿರುದ್ಧ ಬೆಳಗಾವಿ ನಾಲ್ಕನೇ ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಪ್ರೀತಿಸಿದ ಯುವಕನ ಜೊತೆಗೆ ಯುವತಿ ಓಡಿ ಹೋದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಯುವತಿ ಪೋಷಕರು ಯುವಕನ ತಾಯಿ ಮೇಲೆ ದಾಳಿ ಮಾಡಿ ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. ರಾಷ್ಟ್ರಮಟ್ಟದಲ್ಲಿ ಈ ಘಟನೆ ಗಮನ ಸೆಳೆದಿದ್ದು, ರಾಷ್ಟ್ರೀಯ ಮಹಿಳಾ ಆಯೋಗ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಬಿಜೆಪಿ ಸತ್ಯಶೋಧನಾ ಸಮಿತಿ ಬೆಳಗಾವಿಗೆ ಆಗಮಿಸಿ ಸಂತ್ರಸ್ತೆ ಭೇಟಿಯಾಗಿ ಸಾಂತ್ವನ ಹೇಳಿದ್ದರು.
ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಮತರ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಪ್ರಕರಣದ ಕುರಿತು ಸಂತ್ರಸ್ತೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಗ್ರಾಮಸ್ಥರಿಂದ ಮಾಹಿತಿ ಕಲೆಹಾಕಿ ತನಿಖೆ ಪೂರ್ಣಗೊಳಿಸಿದ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.