ಕೋಲಾರ: ಸಾಲಗಾರರ ಕಾಟಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಗ್ರಾಮದಲ್ಲಿ ನಡೆದಿದೆ.
ಕೋಮಲದೇವಿ ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆ. ಮೀಟರ್ ಬಡ್ಡಿ ದಂಧೆ ಕೋರರ ಕಿರುಕುಳಕ್ಕೆ ನೊಂದು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಸಾಲಗಾರರು ಮನೆ ಬಳಿ ಬಂದು ಗಲಾಟೆ ಮಾಡುತ್ತಿದ್ದಂತೆ ಇದರಿಂದ ಮನನೊಂದ ಕೋಮಲದೇವಿ, ಡೆತ್ ನೋಟ್ ಬರೆದಿಟ್ಟು ನಿದ್ದೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅಸ್ವಸ್ಥ ಮಹಿಳೆಯನ್ನು ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಯಲ್ಪಾಡು ಠಾಣೆ ಪೊಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.