
ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಲಕ್ಕೆಪಲ್ಲಿ ಗ್ರಾಮದಲ್ಲಿ ನಡೆದಿದೆ.
ಲಾವಣ್ಯ (30) ಮೃತ ಮಹಿಳೆ. ಲಾವಣ್ಯ ಮಂಜುನಾಥ್ ಎಂಬುವವರು 13 ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಕೌಟುಂಬಕ ಕಲಹದಿಂದ ಮನನೊಂದ ಲಾವಣ್ಯ ವಿಷ ಸೇವಿಸಿದ್ದಳು. ತೀವ್ರ ಅಸ್ವಸ್ಥಳಾಗಿದ್ದ ಲಾವಣ್ಯಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಲಾವಣ್ಯ ಸಾವನ್ನಪ್ಪಿದ್ದಾರೆ. ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.