
ಬೆಂಗಳೂರು: ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಚಾಮರಾಜಪೇಟೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಂದಿನಿ(32) ಶವ ಪತ್ತೆಯಾಗಿದೆ.
ಚಾಮರಾಜಪೇಟೆಯಲ್ಲಿ ರಾತ್ರಿ 9:30ಕ್ಕೆ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದಾಗ ಘಟನೆ ನಡೆದಿದ್ದು, ಕುಟುಂಬದವರ ನೋಡಿ ಶವ ಕೆಳಗಿಳಿಸಿದ್ದಾರೆ. ಪೊಲೀಸರು ಬರುವ ಮೊದಲೇ ಕುಟುಂಬದವರು ಶವ ಕೆಳಗಿಳಿಸಿರುವುದು ಅನುಮಾನಕ್ಕೆ ಕಾರಣವಾಗಿದೆ.
ಎಂಟು ವರ್ಷದ ಹಿಂದೆ ಸೂರ್ಯ ಎಂಬಾತನ ಜೊತೆ ಮದುವೆಯಾಗಿತ್ತು. ದಂಪತಿಗೆ ಒಂದು ಹೆಣ್ಣು ಹಾಗೂ ಒಂದು ಗಂಡು ಮಗು ಇದೆ. ವ್ಯಕ್ತಿಯೊಬ್ಬ ಬಿಬಿಎಂಪಿಯಲ್ಲಿ ಕೆಲಸ ಮಾಡುತ್ತಿದ್ದ ನಂದಿನಿಗೆ ಕರೆ ಮಾಡಿ ಕಿರುಕುಳ ಕೊಡುತ್ತಿದ್ದ ಎಂಬ ಆರೋಪವಿದೆ. ಈ ವಿಚಾರ ಪತಿ -ಪತ್ನಿ ನಡುವೆ ಗಲಾಟೆಗೆ ಕಾರಣವಾಗಿತ್ತು. ಇದರಿಂದ ಮನನೊಂದು ನಂದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.