
ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿರುವ ವಿಡಿಯೋದಲ್ಲಿ ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಗಾಳಿಯಲ್ಲಿ ಹಾರಿ ಬಹಳ ದೂರ ಬಿದ್ದಿದ್ದಾರೆ.
ವರದಿಗಳ ಪ್ರಕಾರ ಸ್ಥಳೀಯ ನಿವಾಸಿಗಳು ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದರು, ನಂತರ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಮತ್ತೊಂದು ಆಸ್ರತ್ರೆಗೆ ರವಾನಿಸಲಾಯಿತು. ಸದ್ಯ ಅವರು ಮೊರಾದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏತನ್ಮಧ್ಯೆ ಮಹಿಳೆಗೆ ಡಿಕ್ಕಿ ಹೊಡೆದು ವಾಹನ ನಿಲ್ಲಿಸದೆ ಪರಾರಿಯಾಗಿರುವ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು ಅದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ.