ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಅತ್ಯಂತ ಹೀನಾಯ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಈ ಕುರಿತು ಐದು ಸದಸ್ಯರ ಸತ್ಯಶೋಧನ ಸಮಿತಿ ರಚಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದರು. ಸಮಿತಿಯಲ್ಲಿ ಲೋಕಸಭಾ ಸದಸ್ಯರಾದ ಐವರು ಮಹಿಳೆಯರಿದ್ದು, ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಲಿದ್ದಾರೆ ಎಂದರು.
ಸಮಿತಿಯಲ್ಲಿ ಸಂಸದೆಯರಾದ ಅರ್ಪಿತಾ ಸಾರಂಗಿ, ಸುನೀತಾ ದುಗ್ಗಲ್, ಲಾಕೇಟ್ ಚಟರ್ಜಿ, ರಂಜೀತಾ ಕೊಲಿ, ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ ಹೇಳಿದ್ದಾರೆ.ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಅತ್ಯಂತ ಹೀನಾಯ ಕೃತ್ಯವಾಗಿದೆ ಎಂದರು.
ಏನಿದು ಘಟನೆ
ಪ್ರೀತಿಸಿದ್ದ ಯುವತಿ ಜೊತೆ ಓಡಿ ಹೋಗಿದ್ದ ಯುವಕನ ತಾಯಿಯನ್ನೇ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿತ್ತು.ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿ ಪೋಷಕರು ಯುವಕನ ತಾಯಿಯನ್ನು ಹೊರಕ್ಕೆ ಎಳೆದುಕೊಂಡು ಬಂದು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದರು.
ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 9 ಕ್ಕೇರಿಕೆಯಾಗಿದೆ. ವಂಟಮೂರಿ ಗ್ರಾಮದಲ್ಲಿ ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿ ಪೋಷಕರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.