ದಕ್ಷಿಣ ಆಫ್ರಿಕಾದಿಂದ ಚಂಡೀಗಢಕ್ಕೆ ಮರಳಿದ್ದ ಮಹಿಳೆಗೆ ಕಡ್ಡಾಯ ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚನೆ ನೀಡಲಾಗಿತ್ತಾದರೂ ಸಹ ಆಕೆ ಸಮೀಪದ ಫೈವ್ ಸ್ಟಾರ್ ಹೋಟೆಲ್ ತೆರಳಿದ್ದಾರೆ ಎಂದು ಆರೋಪಿಸಲಾಗಿದೆ.
ಕೋವಿಡ್ 19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಮಹಿಳೆಯ ವಿರುದ್ಧ ಆರೋಗ್ಯ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದ್ದಾರೆ.
ಡಿಸೆಂಬರ್ 1ರಂದು ದಕ್ಷಿಣ ಆಫ್ರಿಕಾದಿಂದ ಮರಳಿದ್ದ ಮಹಿಳೆಯು ಡಿಸೆಂಬರ್ 2ರಂದು ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿ ಸಂಜೆ ಸುಮಾರಿಗೆ ಫೈವ್ ಸ್ಟಾರ್ ಹೋಟೆಲ್ಗೆ ತೆರಳಿ ರಾತ್ರಿ ವೇಳೆಗೆ ವಾಪಸ್ಸಾಗಿದ್ದಾರೆ.
ಅಪಾಯಕಾರಿ ರಾಷ್ಟ್ರದಿಂದ ಹಿಂದಿರುಗಿರುವ ಈ ಮಹಿಳೆಯು ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಗ್ಯ ಇಲಾಖೆ ಅಧಿಕಾರಿಗಳು ಮಹಿಳೆ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಹೋಟೆಲ್ನ ಎಲ್ಲಾ ಸಿಬ್ಬಂದಿಗೆ ಆರ್ಟಿ ಪಿಸಿಆರ್ ಪರೀಕ್ಷೆಗೆ ಒಳಗಾಗುವಂತೆ ಸೂಚಿಸಲಾಗಿದೆ. ಡಿಸೆಂಬರ್ 1ರಂದು ನಡೆಸಲಾದ ಪರೀಕ್ಷೆಯಲ್ಲಿ ಮಹಿಳೆಯ ಕೊರೊನಾ ವರದಿಯು ನೆಗೆಟಿವ್ ಬಂದಿತ್ತು. ಆದರೂ ಸಹ ಸರ್ಕಾರದ ಮಾರ್ಗಸೂಚಿಯಂತೆ ಹೋಂ ಕ್ವಾರಂಟೈನ್ನಲ್ಲಿರುವುದು ಕಡ್ಡಾಯವಾಗಿದೆ.